ನವದೆಹಲಿ,ಸೆ.19 (DaijiworldNews/TA):ಕಾಂಗ್ರೆಸ್ ಮತ್ತು ಪಾಕಿಸ್ತಾನಗಳು ಒಂದೇ ಉದ್ದೇಶ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂದಿಯಲ್ಲಿ ಎಕ್ಸ್ನಲ್ಲಿ ಬರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯು ಪುನರಾಗಮನವಾಗಬಹುದು ಎಂಬ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರತಿ ಭಾರತ ವಿರೋಧಿ ಶಕ್ತಿಯ ಜೊತೆಗೂಡಿ ದೇಶವಾಸಿಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ವೈಮಾನಿಕ ದಾಳಿ ಮತ್ತು ಸರ್ಜಿಕಲ್ ಸ್ಟ್ರೈಕ್ಗಳ ಪುರಾವೆ ಕೇಳುವುದು ಅಥವಾ ಭಾರತೀಯ ಸೇನೆಯ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನು ಹೇಳುವುದು, ರಾಹುಲ್ ಗಾಂಧಿಯವರ ಕಾಂಗ್ರೆಸ್ ಪಕ್ಷ ಮತ್ತು ಪಾಕಿಸ್ತಾನದ ಟ್ಯೂನ್ ಯಾವಾಗಲೂ ಒಂದೇ ಆಗಿರುತ್ತದೆ ಮತ್ತು ಕಾಂಗ್ರೆಸ್ ಯಾವಾಗಲೂ ದೇಶ ವಿರೋಧಿ ಶಕ್ತಿಗಳೊಂದಿಗೆ ಕೈಜೋಡಿಸುತ್ತದೆ." ಶಾ ಹೇಳಿಕೆ ನೀಡಿದ್ಧಾರೆ.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವಿದೆ ಎಂಬುದನ್ನು ಕಾಂಗ್ರೆಸ್ ಮತ್ತು ಪಾಕಿಸ್ತಾನ ಮರೆತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.