ಬೆಂಗಳೂರು, ಸೆ.19 (DaijiworldNews/TA):ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿದ್ದ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಕೋರ್ಟ್ ಜಮೀನು ನೀಡಿ ಆದೇಶ ಹೊರಡಿಸಿದೆ.
ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಜೈಲಿನಿಂದ ಮುನಿರತ್ನ ಬಿಡುಗಡೆಯಾದರೂ ಮತ್ತೆ ಅತ್ಯಾಚಾರ ಕೇಸ್ನಲ್ಲಿ ಬಂಧನವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.