ಬೆಂಗಳೂರು, ಸೆ.20 (DaijiworldNews/AK): ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಈಗ ಬಯಲಾಗುತ್ತಿವೆ. ಹೂ ಗುಚ್ಛ ನೀಡುವ ನೆಪದಲ್ಲಿ ಇಂಜೆಕ್ಟ್ ಮಾಡಲು ಮುನಿರತ್ನ ಅವರು ಪ್ಲ್ಯಾನ್ ಹಾಕಿಕೊಂಡಿದ್ದರು ಎಂದು ಹೇಳಲಾಗಿದೆ. ಅಲ್ಲದೇ ಮುನಿರತ್ನಂ ನಾಯ್ಡು ಟಾರ್ಗೆಟ್ ಮಾಡಿದ್ದ ನಾಯಕರನ್ನ ‘ಏಡ್ಸ್ ರಕ್ತ’ ಬಳಸಿ ಎಚ್ಐವಿ ಹಬ್ಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿ ಪಕ್ಷದ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಸಹಕರಿಸಬೇಕು ಎಂದು ವ್ಯಂಗ್ಯವಾಡಿದೆ.
ಮುನಿರತ್ನ ಅವರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಅಘಾತಕಾರಿ ಸಂಗತಿ ಹೊರಬಂದಿದೆ. ಇಂತಹ ವಿಕೃತರತ್ನನನ್ನು ತಲೆ ಮೇಲೆ ಹೊತ್ತು ಮೆರೆಸುವ ಬಿಜೆಪಿ ಪಕ್ಷದ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.