ದೆಹಲಿ, ಸೆ.24(DaijiworldNews/AA): ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದೆ. ಹೀಗಿರುವಾಗ ಅವರು ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಪಕ್ಷಪಾತವಾಗಿ ನಡೆಯುವುದಿಲ್ಲವೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಯಾಗಲಿ. ಆದರೆ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಇಲ್ಲದಿದ್ದರೆ ಅವರು ಲೋಕಾಯುಕ್ತದ ಮೇಲೆ ಒತ್ತಡ ಹೇರುತ್ತಾರೆ ಎಂದು ಹೇಳಿದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರು ಅಪಾರಾಧಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಯಾವ ಪ್ರಕರಣವನ್ನು ಪ್ರಾಸಿಕ್ಯೂಷನ್ ಮಾಡಬೇಕು ಎಂದಿದ್ದರೋ, ಅದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ ಎಂದರು.
ದಲಿತರ ಜಮೀನನ್ನು ಖರೀದಿ ಮಾಡಿದ್ದು ಸಿದ್ದರಾಮಯ್ಯ ಅವರು ಮಾಡಿದ ಮೊದಲ ತಪ್ಪು. 1991ರ ನಂತರ ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆಯಲ್ಲಿದ್ದರು. ಈ ಅವಧಿಯಲ್ಲಿ ಹಳ್ಳಿಯಲ್ಲಿ ಜಮೀನು ಕೊಟ್ಟು, ಮೈಸೂರಿನ ಪ್ರತಿಷ್ಠಿತ ಏರಿಯಾದಲ್ಲಿ ಸೈಟ್ ಪಡೆದಿದ್ದಾರೆ. ಈಗ ಹೈಕೋರ್ಟ್ ಕೂಡಾ ತನಿಖೆ ಆಗಬೇಕು ಎಂದಿದೆ. ಈ ಹಿಂದೆ ರಾಜ್ಯಪಾಲರ ವಿರುದ್ಧ ಹೇಗೆಲ್ಲ ಮಾತನಾಡಿದ್ದರು. ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಬಂದ ಗತಿ ರಾಜ್ಯಪಾಲರಿಗೆ ಬರುತ್ತೆ ಎಂದಿದ್ದರು. ಆದರೂ ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.