ಕೋಲ್ಕತ್ತಾ,ಸೆ.27(DaijiworldNews/TA):ಇರಾಕ್ನ ಬಾಗ್ದಾದ್ನಿಂದ ಚೀನಾದ ಗುವಾಂಗ್ಝೌಗೆ ತೆರಳುತ್ತಿದ್ದ ಇರಾಕಿ ಏರ್ವೇಸ್ ವಿಮಾನದಲ್ಲಿದ್ದ 16 ವರ್ಷದ ಬಾಲಕಿಯೊಬ್ಬಳು ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಇದರಿಂದಾಗಿ ವಿಮಾನನ್ನು ತಕ್ಷಣ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನ ನಿಲ್ದಾಣದ ಆರೋಗ್ಯ ಅಧಿಕಾರಿ ಬಾಲಕಿಯನ್ನು ಪರೀಕ್ಷಿಸಿದಾಗ ನಾಡಿಮಿಡಿತ ಮತ್ತು ಹೃದಯ ಬಡಿತ ಕಂಡು ಬರಲಿಲ್ಲ. ಹೆಚ್ಚಿನ ಚಿಕಿತ್ಸೆಗೆ ಬಾಲಕಿಯನ್ನು ವೈದ್ಯರು ಹತ್ತಿರದ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ವೇಳೆ ಬಾಲಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಇರಾಕಿನ ಬಾಲಕಿಯ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.