ಬೆಂಗಳೂರು, ಸೆ.27(DaijiworldNews/TA):ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಸಿಆರ್ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ಕೂಡಾ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಇನ್ನು ಮಲ್ಲಿಕಾರ್ಜುನ A 3, ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ಐಆರ್ನಲ್ಲಿ ದಾಖಲು ಮಾಡಲಾಗಿದೆ.