ಬೆಂಗಳೂರು, ಸೆ.27(DaijiworldNews/AK): ಸಿಬಿಐ ತನಿಖೆಗೆ ನೀಡಲಾಗಿದ್ದ ಮುಕ್ತ ಅನುಮತಿಯನ್ನು ಹಿಂದಕ್ಕೆ ಪಡೆದ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ನ ಖರ್ಗೆ ಬೆಂಬಲಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಿಬಿಐ ಪೂರ್ವಗ್ರಹದಿಂದ ಕಾರ್ಯ ನಿರ್ವಹಿಸುತ್ತಿರುವುದು ದೃಢಪಟ್ಟಿದೆ. ಹಾಗಾಗಿ ಸಿಬಿಐಗೆ ಮುಕ್ತ ಅವಕಾಶ ನೀಡಬಾರದು ಎಂದು ಸಂಪುಟ ಸಭೆಯಲ್ಲಿ ಗುರುವಾರ ತೀರ್ಮಾನಿಸಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ , ಸಿಬಿಐ ತನಿಖೆಗೆ ನೀಡಿದ್ದ ಮುಕ್ತ ಅನುಮತಿಯನ್ನು ಹಿಂದಕ್ಕೆ ಪಡೆದಿರುವುದು ಇದೇ ಮೊದಲಲ್ಲ. ದೇವರಾಜ ಅರಸು ಅವರು ಸಿಎಂ ಆಗಿದ್ದಾಗ ಹೀಗೆ ಮಾಡಲಾಗಿತ್ತು. ಆದ್ದರಿಂದ ಇದು ಸಾಮಾನ್ಯ ವಿಚಾರ ಎಂದು ಹೇಳಿದ್ದಾರೆ.