ಬೆಂಗಳೂರು, ಸೆ.30(DaijiworldNews/AA): ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ವಾಸ ಅನುಭವಿಸುತ್ತಿರುವ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿದೆ.
ಸೆ. 27 ರಂದು ನಡೆದ ಜಾಮೀನು ಅಜಿ ವಿಚಾರಣೆ ವೇಳೆ ದರ್ಶನ್ ಪರ ವಕೀಲರು ಕಾಲಾವಕಾಶ ಕೇಳಿದ ಹಿನ್ನೆಲೆ ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಇದೀಗ ಇಂದು ಕೂಡ ದರ್ಶನ್ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ಮನವಿ ಮಾಡಿರುವ ಹಿನ್ನೆಲೆ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಲಾಗಿದೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್ ಶೀಟ್ ಸಲ್ಲಿಕೆ ಆದ ಬಳಿಕ ನಟ ದರ್ಶನ್ ಸೆ.21ರಂದು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯು 2 ಬಾರಿ ಮುಂದೂಡಿಕೆಯಾಗಿ ಸೆ. 27ರಂದು ವಿಚಾರಣೆ ನಡೆದಿತ್ತು.