ನವದೆಹಲಿ,ಅ.01(DaijiworldNews/AK): ಅನಧಿಕೃತ ಕಟ್ಟಡಗಳನ್ನು ಕೆಡವಲು ರೂಪಿಸುವ ಮಾರ್ಗಸೂಚಿಗಳು ದೇಶಾದ್ಯಂತ ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಒಂದು ಕಾನೂನು ಇರಬೇಕು, ಅದು ಧರ್ಮ ಅಥವಾ ನಂಬಿಕೆಗಳ ಮೇಲೆ ಅವಲಂಬಿತವಾಗಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನಮ್ಮದು ಜಾತ್ಯತೀತ ದೇಶ, ನಾವು ಕೈಗೊಳ್ಳುವ ಕ್ರಮಗಳು ಎಲ್ಲಾ ಸಂಸ್ಥೆಗಳಿಗೂ ಎಲ್ಲಾ ಸಮುದಾಯಕ್ಕೂ ಅನ್ವಯವಾಗುತ್ತದೆ. ಅದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಅಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠ ಹೇಳಿದೆ.
ಸಾರ್ವಜನಿಕ ಸುರಕ್ಷತೆಯು ಬಹಳ ಮುಖ್ಯವಾಗಿದೆ. ರಸ್ತೆ, ಜಲಮೂಲಗಳು ಅಥವಾ ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.