ಮೈಸೂರುಅ.01(DaijiworldNews/AK): ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್ಐಆರ್ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ್ದ 14 ನಿವೇಶನಗಳ ಖಾತೆಯನ್ನು ಮುಡಾ ರದ್ದುಗೊಳಿಸಿದೆ.
ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿ ಅವರು ತಮ್ಮ ಜಮೀನಿಗೆ ಬದಲಿಯಾಗಿ ವಿಜಯನಗರದ 3 ಮತ್ತು 4ನೇ ಹಂತಗಳಲ್ಲಿ ವಿವಿಧ ಅಳತೆಯಲ್ಲಿ ನೀಡಲಾಗಿದ್ದ 14 ನಿವೇಶ ವಾಪಸ್ ಪಡೆಯುವಂತೆ ಪತ್ರದಲ್ಲಿ ಮುಡಾ ಆಯುಕ್ತರಿಗೆ ಮನವಿ ಮಾಡಿದ್ದರು.ಪತ್ರ ಬರೆದ ಮರುದಿನವೇ ಮುಡಾ 14 ನಿವೇಶನಗಳ ಖಾತೆಯನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.