ಬೆಂಗಳೂರು, ಅ.02(DaijiworldNews/TA):ಮೊದಲು ಮೂಡಾ ಆಯುಕ್ತರನ್ನ ಬಂಧಿಸಬೇಕು. ಅವರು ಯಾವ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿರುವ ಸೈಟುಗಳನ್ನ ವಾಪಸ್ ಪಡೆದರು ಅನ್ನೋದು ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಯನ್ನು ಬಂಧಿಸಬೇಕು ಎಂದು ಹೇಳಿಕೆ ನೀಡಿದ್ದಾರೆ.
ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಪತ್ನಿ ಸೈಟು ವಾಪಸ್ ನೀಡಿದ ಬೆನ್ನಲ್ಲೇ ವಿಪಕ್ಷಗಳ ನಡುವಿನ ವಾಗ್ದಾಳಿ ಇನ್ನಷ್ಟು ತೀವ್ರಗೊಂಡಿದೆ. ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿ ವಾಗ್ದಾಳಿ ನಡೆಸುತ್ತಿದ್ದಾರೆ.