ಬೆಂಗಳೂರು, ಅ.05(DaijiworldNews/AA): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರ ವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಮುನಿರತ್ನ ಅವರ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಬಳಿಕ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರು ಪಡಿಸಿದ್ದಾರೆ. ಈ ವೇಳೆ ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದ್ದಾರೆ. ಅದರಂತೆ ಕೋರ್ಟ್ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್ ಮುಂದೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್ ಸೂಚನೆ ನೀಡಿದೆ. ಒಂದು ವೇಳೆ ಜೈಲು ಅಧಿಕಾರಿಗಳು ಅನುಮತಿ ನೀಡದಿದ್ದರೆ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ.