ಚಂಡೀಗಢ, ಅ.05(DaijiworldNews/AA): ಕಾಂಗ್ರೆಸ್ ಸುಳ್ಳು ಮತ್ತು ಲೂಟಿಯ ರಾಜಕೀಯವನ್ನು ಮಾಡುತ್ತದೆ. ಹರಿಯಾಣದ ಜನರು ಇದನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ ಹೇಳಿದ್ದಾರೆ.
ಅಂಬಲಾ ಜಿಲ್ಲೆಯ ತಮ್ಮ ಗ್ರಾಮವಾದ ಮಿರ್ಜಾದಲ್ಲಿ ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳಿನ ಮೂಲಕ ಮತದಾರರನ್ನು ವಂಚಿಸಿ ರಾಜ್ಯವನ್ನು ಲೂಟಿ ಮಾಡುವ ನೀತಿಯನ್ನು ಕಾಂಗ್ರೆಸ್ ಅನುಸರಿಸುತ್ತಿದೆ. ಹೀಗಾಗಿ, ರಾಜ್ಯದಲ್ಲಿ ಮೂರನೇ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಜನರು ಮನಸ್ಸು ಮಾಡಿದ್ದಾರೆ ಎಂದರು.
ಕಾಂಗ್ರೆಸ್ ನಿರಂತರವಾಗಿ ದಲಿತ ಸಮುದಾಯವನ್ನು ಅವಮಾನಿಸುತ್ತಿದೆ. ಅಲ್ಲದೆ, ದಲಿತರ ಉನ್ನತಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿಲ್ಲ. ಹರಿಯಾಣ ಜನರ ನಿಲುವು ಸ್ಪಷ್ಟವಾಗಿದೆ. ರಾಜ್ಯದಲ್ಲಿ ಬಿಜೆಪಿ ಮೂರನೇ ಬಾರಿಗೆ ಜನಾದೇಶದೊಂದಿಗೆ ಸರ್ಕಾರ ರಚಿಸಲಿದೆ. 10 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಉತ್ತಮ ಕಾರ್ಯಗಳನ್ನು ಮಾಡಿದೆ ಎಂದು ತಿಳಿಸಿದರು.