ಚಿತ್ರದುರ್ಗ, ಅ.07(DaijiworldNews/AA): ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುರುಘಾಶ್ರೀಗೆ ಕೋರ್ಟ್ ಜಾಮೀನು ನೀಡಿದೆ.
ಈ ಹಿಂದೆ ಮುರುಘಾಶ್ರೀಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಮುರುಘಾಶ್ರೀಗೆ ಮಂಜೂರು ಮಾಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿತ್ತು.
ಈ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸಬೇಕು. ಅಷ್ಟೇ ಅಲ್ಲದೇ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವವರೆಗೆ ಬಂಧನದಲ್ಲಿಡುವಂತೆ ಆದೇಶ ಹೊರಡಿಸಿತ್ತು. ಇದೀಗ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆ ಕೋರ್ಟ್ ಇಂದೇ ಮುರುಘಾಶ್ರೀ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದೆ.