ನವದೆಹಲಿ, ಅ.07(DaijiworldNews/AK): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಕ್ಸಲ್ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ್ದಾರೆ.
ಛತ್ತೀ ಸಗಢದ ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿನ ಬಸ್ತರ್ ಅರಣ್ಯ ಪ್ರದೇಶದಲ್ಲಿ ಗುರುವಾರ ಮತ್ತು ಶುಕ್ರವಾರ ಕಾರ್ಯಾಚರಣೆ ನಡೆಸಿದ್ದ ಭದ್ರತಾ ಪಡೆಗಳು, 31 ನಕ್ಸಲರನ್ನು ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ , ಅಮಿತ್ ಶಾ ಸಭೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಛತ್ತೀಸಗಢ, ಒಡಿಶಾ, ತೆಲಂಗಾಣ, ಮಹಾರಾಷ್ಟ್ರ , ಜಾರ್ಖಂಡ್, ಬಿಹಾರ, ಆಂಧ್ರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ನಕ್ಸಲರ ಭೀತಿ ಹೆಚ್ಚಿದ್ದು, ಈ ರಾಜ್ಯಗಳೊಂದಿಗೆ ನಿಕಟ ಸಂಪರ್ಕ ದಲ್ಲಿರುವ ಕೇಂದ್ರ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಉನ್ನತಾಧಿಕಾರಿಗಳು, ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.