ನವದೆಹಲಿ, ಅ.07(DaijiworldNews/AK):ಜಮ್ಮು ಕಾಶ್ಮೀರ, ಹರಿಯಾಣದಲ್ಲಿ ನಾಳೆ (ಅಕ್ಟೋಬರ್ 8) ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಿತು.
ಮೊದಲ ಹಂತದಲ್ಲಿ 24 ಸ್ಥಾನಗಳಿಗೆ ಮತದಾನ ನಡೆದಿದ್ದು, ಎರಡನೇ ಹಂತದಲ್ಲಿ 26 ಮತ್ತು ಮೂರನೇ ಹಂತದಲ್ಲಿ 40 ಸ್ಥಾನಗಳಿಗೆ ಮತದಾನ ನಡೆದಿದೆ.ಜಮ್ಮು ಕಾಶ್ಮೀರದಲ್ಲಿ ಎಕ್ಸಿಟ್ ಪೋಲ್ಗಳು ಎನ್ಸಿ-ಕಾಂಗ್ರೆಸ್ ಮೈತ್ರಿಯ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಇನ್ನು ಪ್ರಾದೇಶಿಕ ಪಕ್ಷವು ಹೆಚ್ಚಿನ ಸ್ಥಾನಗಳನ್ನು ಪಡೆಯುತ್ತದೆ ಎನ್ನಲಾಗಿದೆ. 2014ರ ಚುನಾವಣೆಯಲ್ಲಿ ಗೆದ್ದಿದ್ದ 25 ಸ್ಥಾನಗಳಲ್ಲಿ ಬಿಜೆಪಿ ಸ್ವಲ್ಪ ಸುಧಾರಿಸಿಕೊಳ್ಳುವ ನಿರೀಕ್ಷೆಯಿದೆ. 2014ರ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆದ್ದಿದ್ದ ಪಿಡಿಪಿ ಈ ಬಾರಿ 10ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಎಕ್ಸಿಟ್ ಪೋಲ್ಗಳು ಭವಿಷ್ಯ ನುಡಿದಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಒಟ್ಟಾಗಿ ಚುನಾವಣೆ ಎದುರಿಸಿದರೆ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಭಾರತೀಯ ಜನತಾ ಪಾರ್ಟಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಫಲಿತಾಂಶಗಳನ್ನು ಮತದಾರರು ಆನ್ಲೈನ್ನಲ್ಲಿ ಪರಿಶೀಲಿಸಬಹುದು.