ಶ್ರೀನಗರ, ಅ.08(DaijiworldNews/AK): ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ.ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಅವರು ಒಮರ್ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷನಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ.
ಮಧ್ಯಾಹ್ನ ಟ್ರೆಂಡ್ ಪ್ರಕಾರ ಎನ್ಸಿ ಮತ್ತು ಕಾಂಗ್ರೆಸ್ ಮೈತ್ರಿಕೂಟ 51ಕ್ಷೇತ್ರ, ಬಿಜೆಪಿ 27, ಪಿಡಿಪಿ 02, ಇತರರು 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.ಒಟ್ಟು 90 ಕ್ಷೇತ್ರಗಳ ಪೈಕಿ ಎನ್ಸಿ 56, ಕಾಂಗ್ರೆಸ್ 38, ಸಿಪಿಎಂ 1 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಇಳಿಸಿದ್ದವು. ಬಿಜೆಪಿ 62 ಕ್ಷೇತ್ರಗಳಲ್ಲಿ ಪಿಡಿಪಿ 81 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿತ್ತು.
90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯು ಮೂರು ಹಂತಗಳಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ನಡೆದಿತ್ತು