ಬೆಂಗಳೂರು, ಅ.09(DaijiworldNews/AK): ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ವೆಸಗಿದ್ದಾರೆ ಎಂಬ ದೂರು ಆಧರಿಸಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆದರಿಕೆ ಹಾಕಿದ ಆರೋಪದಡಿ ವಿನಯ್ ಕುಲಕರ್ಣಿ ಆಪ್ತ ಅರ್ಜುನ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಇತ್ತ ತನ್ನ ವಿಡಿಯೋ , ಮೊಬೈಲ್ ಸಂಭಾಷಣೆ ಪ್ರಸಾರ ಮಾಡಲು ಷಡ್ಯಂತರ ರೂಪಿಸಿದ್ದಾರೆ ಎಂದು ಶಾಸಕ ವಿನಯ್ ಕುಲಕರ್ಣಿ ಅವರು ಪ್ರತಿದೂರು ನೀಡಿದ್ದಾರೆ. ದೂರು ಆಧರಿಸಿ ಖಾಸಗಿ ಸುದ್ದಿ ವಾಹಿನಿ ಮತ್ತು ಸಂತ್ರಸ್ತೆ ವಿರುದ್ಧ ಸಂಜಯ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಂತ್ರಸ್ತೆ ಅನೇಕ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಬ್ಲಾಕ್ ಮೇಲ್ ಮಾಡಿದ್ದಾಳೆ. ಸಂತ್ರಸ್ತೆ ಮೂಲಕ ನನ್ನ ವಿರುದ್ಧ ಸಂಚು ರೂಪಿಸಿ ಮಾನಹಾನಿ ಮಾಡಲಾಗಿದೆ ಎಂದು ವಿನಯ ಕುಲಕರ್ಣಿ ದೂರಿನಲ್ಲಿ ದಾಖಲಿಸಿದ್ದಾರೆ.