ಮುಂಬೈ, ಅ.14(DaijiworldNews/AA): ಶಿವಸೇನಾ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ಆಂಜಿಯೋಪ್ಲ್ಯಾಸ್ಟಿ ಪ್ರಕ್ರಿಯೆಗಾಗಿ ಇಂದು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರಿಗೆ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಉದ್ಧವ್ ಠಾಕ್ರೆ ಅವರಿಗೆ ಇಂದು ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಉದ್ಧವ್ ಠಾಕ್ರೆ ಇನ್ನೂ ಒಂದು ದಿನ ಆಸ್ಪತ್ರೆಯಲ್ಲಿ ಉಳಿಯಬೇಕಾಗುತ್ತದೆ. ನಾಳೆ ಸಂಜೆ ಅಥವಾ ಬುಧವಾರ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ಸಾಧ್ಯತೆ ಇದೆ ಎನ್ನಲಾಗಿದೆ.
ಆಂಜಿಯೋಪ್ಲಾಸ್ಟಿ ನಂತರ ಉದ್ಧವ್ ಠಾಕ್ರೆ ಅವರ ಆರೋಗ್ಯ ಸುಧಾರಿಸಲಿದೆ. ಆತಂಕ ಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಅವರು ಚೇತರಿಸಿಕೊಳ್ಳಲಿದ್ದು, ಮನೆಗೆ ಮರಳುತ್ತಾರೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸುತ್ತಾರೆ ಎಂಬ ಮಾಹಿತಿ ತಿಳಿದುಬಂದಿದೆ.