ಬೆಂಗಳೂರು,ಅ.13(DaijiworldNews/AA): ರಾಜ್ಯದಲ್ಲಿ ಹಿಂದೂ ವಿರೋಧಿ ಸರಕಾರವಿದೆ. ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದೇಶದ್ರೋ ಹಿಗಳನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ .ವಿಜಯೇಂದ್ರ ದೂರಿದರು.
ನಗರದ ಸ್ವಾತಂತ್ರ್ಯ ಉದ್ಯಾನವನದ ಬಳಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿ, ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ, ದಾಳಿಮಾಡಿದ್ದ, ಗಲಭೆ ಸೃಷ್ಟಿಸಿದ್ದ ದೇಶದ್ರೋಹಿಗಳ ಮೇಲಿನ ಕೇಸುಗಳನ್ನು ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಹಿಂದಕ್ಕೆ ಪಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತಿದ್ದು, ಅದನ್ನು ಉಳಿಸಿಕೊಳ್ಳಲು ಯಾವ ಮಟ್ಟಕ್ಕೆ ಹೋಗಲು ಕೂಡ ಕಾಂಗ್ರೆಸ್ ಸರಕಾರ ಹೇಸುವುದಿಲ್ಲ ಎಂದು ದೂರಿದರು.