ನವದೆಹಲಿ, ಅ.15(DaijiworldNews/AK): ಮಹಾರಾಷ್ಟ್ರ ಮತ್ತು ಜಾರ್ಖಂಡ್ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಲಿದೆ.ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಇದೇ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ ೨೬ಕ್ಕೆ ಕೊನೆಗೊಳ್ಳಿದ್ದು, ೮೧ ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನ ಸಭೆ 2025ರ ಜನವರಿ 5 ರಂದು ಅವಧಿ ಪೂರ್ಣಗೊಳ್ಳಲಿದೆ.
ಮಹಾರಾಷ್ಟ್ರ ದಲ್ಲಿ ಶಿವಸೇನೆ (ಸಿಂಧೆ ಬಣ), ಬಿಜೆಪಿ ಹಾಗೂ ಎನ್ಸಿಪಿ (ಅಜಿತ್ ಪವಾರ್ ಬಣ) ಮೈತ್ರಿ ಕೂಟ ಅಧಿಕಾರದಲ್ಲಿದೆ. ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರು ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ.ಜಾರ್ಖಂಡ್ ರಾಜ್ಯದಲ್ಲಿ ಜಾರ್ಖಂ ಡ್ ಮುಕ್ತಿ ಮೋ ರ್ಚಾ (ಜೆಎಂ ಎಂ ) ನೇತೃತ್ವದ ಮೈತ್ರಿಕೂಟವು ಅಧಿಕಾರದಲ್ಲಿದೆ.