ಪಿಥೋರ್ ಗಢ, ಅ.16(DaijiworldNews/AA): ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಬುಧವಾರ ಪಿಥೋರ್ ಗಢದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಉತ್ತರಾಖಂಡದ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ವಿಜಯ್ ಕುಮಾರ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ನಲ್ಲಿರುವ ಎಲ್ಲಾ ಜನರು ಸುರಕ್ಷಿತವಾಗಿದ್ದಾರೆ ಎಂದು ಉತ್ತರಾಖಂಡ ಸರ್ಕಾರ ಹೇಳಿದೆ.
ಇಬ್ಬರು ಅಧಿಕಾರಿಗಳು ಸುರಕ್ಷಿತವಾಗಿ ಪಿಥೋರಗಢದ ರಲಂ ಗ್ರಾಮದಲ್ಲಿ ಬಂದಿಳಿದಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ಲ್ಯಾಂಡ್ ಆಗಿತ್ತು. ಚುನಾವಣಾ ಆಯೋಗದ ಉನ್ನತ ಅಧಿಕಾರಿ ಉತ್ತರಾಖಂಡ್ನ ಆದಿ ಕೈಲಾಶ್ಗೆ ಭೇಟಿ ನೀಡುತ್ತಿದ್ದಾಗ ಅವರ ಹೆಲಿಕಾಪ್ಟರ್ ಕೆಟ್ಟ ಹವಾಮಾನದಿಂದಾಗಿ ಪ್ರಕ್ಷುಬ್ಧತೆಗೆ ಒಳಗಾಯಿತು. ಈ ಹಿನ್ನೆಲೆ ಹೆಲಿಕಾಪ್ಟರ್ ನನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.