ದೆಹಲಿ, ಅ.16(DaijiworldNews/AK):ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಬುಧವಾರ ಅಭಿನಂದಿಸಿದ್ದಾರೆ.
ತಮ್ಮ ಸಂದೇಶದಲ್ಲಿ ರಾಹುಲ್ ಗಾಂಧಿ 2019 ರಲ್ಲಿ ಹಿಂಪಡೆಯಲಾದ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವ ಬೇಡಿಕೆಯನ್ನು ಗಾಂಧಿ ಪುನರುಚ್ಚರಿಸಿದ್ದಾರೆ.
ಸಿಎಂ ಒಮರ್ ಅಬ್ದುಲ್ಲಾ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರಿಗೆ ಅಭಿನಂದನೆಗಳು. ಆದರೆ, ರಾಜ್ಯ ಸ್ಥಾನಮಾನ ಇಲ್ಲದ ಸರ್ಕಾರ ರಚನೆಯು ಇಂದು ಅಪೂರ್ಣವಾಗಿದೆ ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಜನರಿಂದ ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳಲಾಗಿದೆ. ರಾಜ್ಯ ಸ್ಥಾನಮಾನವನ್ನು ಸಂಪೂರ್ಣವಾಗಿ ಮರುಸ್ಥಾಪಿಸುವವರೆಗೆ ನಮ್ಮ ಹೋರಾಟವನ್ನು ಮುಂದುವರೆಸುವ ನಮ್ಮ ಪ್ರತಿಜ್ಞೆಯನ್ನು ನಾವು ಇಂದು ನವೀಕರಿಸುತ್ತೇವೆ ಎಂದು ರಾಹುಲ್ ಹೇಳಿದ್ದಾರೆ.