ಬಳ್ಳಾರಿ, ಅ.17(DaijiworldNews/TA): ವಾಲ್ಮೀಕಿ ಜೈಲು ಸೇರಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಇಂದು (ಅಕ್ಟೋಬರ್ 17) ವಾಲ್ಮೀಕಿ ಜಯಂತಿ ದಿನವೇ ಬಳ್ಳಾರಿ ಜಿಲ್ಲೆಗೆ ಪ್ರವೇಶ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ, ಇದೆಲ್ಲ ಸುಳ್ಳು ಆರೋಪ. ಸಣ್ಣದೋಷ ಇಲ್ಲದೇ ಹೊರ ಬರುತ್ತೇನೆ ಎಂದು ಭಾವಕರಾದರು.ಅಲ್ಲದೇ ಪರಪ್ಪನ ಅಗ್ರಹಾರದ ಜೈಲಿನ ಗೋಡೆ ಮೇಲೆ ಬಿಜೆಪಿ ನಾಯಕರ ಹೆಸರು ಬರೆದು ಬಂದಿರುವೆ. ಅವರೆಲ್ಲಾ ಜೈಲು ಪಾಲಾಗ್ತಾರೆ ನೋಡುತ್ತಿರಿ ಎಂದು ಭವಿಷ್ಯ ನುಡಿದಿದ್ದಾರೆ.
ನನ್ನ ವಿರುದ್ಧ ಷಡ್ಯಂತ್ರ ಆಗಿದೆ, ನಾನು ಅಕ್ರಮ ಮಾಡಿರುವೆ ಎಂದು ಕೆಲವರು ನಂಬಿದ್ದಾರೆ. ಇದು ಸುಳ್ಳು ಎಂದು ನಾನು ಯಾರನ್ನೂ ನಂಬಿಸಬೇಕಿಲ್ಲ. ಈ ಸುಳ್ಳಿನ ಪ್ರಪಂಚದಲ್ಲಿ ಕೆಟ್ಟ ಕೆಲಸಕ್ಕೆ ಕೈ ಹಾಕಲು ಮುಂದಾಗಿದ್ದಾರೆ. ನಾನು ಹಲವು ಬಾರಿ ಜೈಲು ನೋಡಿದ್ದೇನೆ. ಆದರೇ ಒಂದು ಸುಳ್ಳು ತಗೊಂಡು ಬಂದು ನನ್ನ ಮೇಲೆ ಗೂಬೆ ಕೂರಿಸಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.