ಉತ್ತರಪ್ರದೇಶ,ಅ.17(DaijiworldNews/TA):ಬಹ್ರೈಚ್ ಹಿಂಸಾಚಾರದ ಆರೋಪಿಗಳಿಗೆ ಪೊಲೀಸರು ನಡೆಸಿದ ಎನ್ಕೌಂಟರ್ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ಕಷ್ಟವೇನಲ್ಲ. ಯೋಗಿಯ ಥೋಕ್ ಡೆಂಗೆ ನೀತಿಯ ಬಗ್ಗೆ ಎಲ್ಲರಿಗೂ ತಿಳಿದಿದೆ ಎಂದು ಓವೈಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ಗುರುವಾರ ಬಹ್ರೈಚ್ ಎನ್ಕೌಂಟರ್ ಕುರಿತು ಉತ್ತರ ಪ್ರದೇಶ ಸರ್ಕಾರವನ್ನು ಹೀಗೆ ಟೀಕಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ಕೈಗೊಂಡ ಕ್ರಮಗಳನ್ನು ಓವೈಸಿ ಪ್ರಶ್ನಿಸಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ‘ಥೋಕ್ ಡೆಂಗೆ’ ನೀತಿ ಎಂದು ಅವರು ಪ್ರಸ್ತಾಪಿಸಿದ್ದಾರೆ.
ಎನ್ಕೌಂಟರ್ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿದ್ದರೆ, ಅವರು "ನ್ಯಾಯಬಾಹಿರ ಕ್ರಮಗಳನ್ನು ಆಶ್ರಯಿಸುವ" ಬದಲಿಗೆ ಆರೋಪಿಗಳಿಗೆ ಕಾನೂನು ಶಿಕ್ಷೆಯನ್ನು ಅನುಸರಿಸಬೇಕಾಗಿತ್ತು ಎಂದು ಹೇಳಿದ್ದಾರೆ.