ಮೈಸೂರು, ಅ.18(DaijiworldNews/AA): ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಹಾಗೂ ತಹಸೀಲ್ದಾರ್ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಇ.ಡಿ ದಾಳಿ ನಡೆಸಿದ್ದು, ಮುಡಾ ಅಧಿಕಾರಿಗೆ ಸಮನ್ಸ್ ನೀಡಿದರೂ ದಾಖಲೆ ನೀಡದ ಹಿನ್ನೆಲೆ ದಾಳಿ ಮಾಡಲಾಗಿದೆ.
ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ದೇವರಾಜು ಮನೆಯ ಮೇಲೂ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.