ಬೆಂಗಳೂರು, ಅ.18(DaijiworldNews/AK):ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್, ಜಾರಿ ನಿರ್ದೇಶನಾಲಯ ದಾಳಿ ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 10-15 ದಿನದ ಹಿಂದೆ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಕೇಸ್ ದಾಖಲಾದ ಹಿನ್ನೆಲೆಯಲ್ಲಿ ದಾಳಿ ಸಾಮಾನ್ಯ. ಮುಡಾ ಕೇಸ್ನಲ್ಲಿ ಯಾವುದೇ ಹಣಕಾಸು ವಹಿವಾಟು ನಡೆದಿಲ್ಲ. ಈ ಪ್ರಕರಣದಲ್ಲಿ ಏನೂ ಇಲ್ಲ ಎಂಬುದು ಅವರಿಗೆ ಗೊತ್ತಾಗಲಿದೆ. ಲೋಕಾಯುಕ್ತ ಪ್ರವೇಶಕ್ಕೆ ಅವಕಾಶವಿದೆ, ಸತ್ಯಾಂಶ ಹೊರ ಬರಬೇಕು. ಇದೊಂದು ರಾಜಕೀಯ ಪ್ರೇರಿತ ಪ್ರಕರಣ ಎಂದರು.
ಮುಡಾ ಕುರಿತ ಆರೋಪಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ. ಕೊನೆಗೆ ಇಡಿ ಅರಿವಾಗುತ್ತದೆ ಎಂದು ಡಿಕೆ ಸುರೇಶ್ ಹೇಳಿದರು.