ಮೈಸೂರು, 19(DaijiworldNews/AK): ಸಿಎಂ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು.
ಸುದ್ದಿಗೋಷ್ಟೀಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 5 ಸಾವಿರ ಕೋಟಿ ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ನಿವೇಶನಗಳ ಫಲಾನುಭವಿ ಆಗಿರುವ ಕಾರಣ ಸ್ವತಂತ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಈ ಹಿಂದಿನಿಂದಲೂ ಒತ್ತಾಯಿಸುತ್ತ ಬಂದಿದೆ. ರಾಜ್ಯಪಾಲರು ಸಹ ತನಿಖೆಗೆ ಸೂಚಿಸಿದ್ದಾರೆ. ಈಗಾಲಾದರೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂ ದು ಅವರು ಆಗ್ರಹಿಸಿದರು.
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೇ ಇದ್ದರೆ ಬಿಜೆಪಿ ಕಾನೂನಾತ್ಮಕಹೋರಾಟ ಮುಂದುವರಿಸಲಿದೆ ಎಂದರು. ಇ.ಡಿ. ದಾಳಿ ರಾಜಕೀ ಯ ಪ್ರೇರಿತ ಅಲ್ಲ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.