ನವದೆಹಲಿ, ,ಅ.22(DaijiworldNews/AK): ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಾಳೆ (ಬುಧವಾರ) ವಯನಾಡ್ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಬುಧವಾರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಕಲ್ಪೆಟ್ಟಾ ಹೊಸ ಬಸ್ ನಿಲ್ದಾಣದಿಂದ ಬೆಳಿಗ್ಗೆ 11 ಗಂಟೆಗೆ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ
ವಯನಾಡ್ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದ ಕೂಡಲೇ ಕೇರಳದ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ (52) ಅವರು ತಮ್ಮ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಘೋಷಿಸಿತು.ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.
2024 ರ ಲೋಕಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಿಂದ ಗೆದ್ದ ನಂತರ ಅಮೇಥಿಯನ್ನು ಉಳಿಸಿಕೊಳ್ಳುವ ನಿರ್ಧಾರದ ನಂತರ ರಾಹುಲ್ ವಯನಾಡ್ ಸ್ಥಾನವನ್ನು ತೆರವು ಮಾಡಿದಾಗ ಉಪಚುನಾವಣೆ ಅಗತ್ಯವಾಗಿತ್ತು.ಭಾರತದ ಚುನಾವಣಾ ಆಯೋಗವು ಅಕ್ಟೋಬರ್ 15 ರಂದು 48 ಅಸೆಂಬ್ಲಿ ಕ್ಷೇತ್ರಗಳು ಮತ್ತು ಎರಡು ಸಂಸದೀಯ ಸ್ಥಾನಗಳಿಗೆ ಉಪಚುನಾವಣೆಗಳನ್ನು ಘೋಷಿಸಿತು. ಕೇರಳದ 47 ವಿಧಾನಸಭಾ ಕ್ಷೇತ್ರಗಳು ಮತ್ತು ವಯನಾಡ್ ಸಂಸದೀಯ ಸ್ಥಾನವನ್ನು ಒಳಗೊಂಡ ಮೊದಲ ಹಂತದ ಮತದಾನವು ನವೆಂಬರ್ 13ರಂದು ನಡೆಯಲಿದೆ.