ತುಮಕೂರು, ಅ.25(DaijiworldNews/AA): ಕಾಂಗ್ರೆಸ್ ಪಕ್ಷದ ವರಿಷ್ಠರು ಗೆಲ್ಲುವ ಅಭ್ಯರ್ಥಿಯನ್ನು ಬಿಟ್ಟು ಶಿಗ್ಗಾವಿ ಕ್ಷೇತ್ರದಲ್ಲಿ ಒಬ್ಬ ರೌಡಿಶೀಟರ್ಗೆ ಟಿಕೆಟ್ ನೀಡಿದ್ದಾರೆ ಎಂದು ಟಿಕೆಟ್ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್ ಖಾದ್ರಿ ತಿಳಿಸಿದ್ದಾರೆ.
ಅಜ್ಜಂಪೀರ್ ಖಾದ್ರಿ ಸುದ್ದಿಗಾರರೊಂದಿಗೆ ಮಾತಾಡಿ ಶಿಗ್ಗಾವಿ ಕ್ಷೇತ್ರದ ಟಿಕೆಟ್ ಗಿಟ್ಟಿಸಿರುವ ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಥಳೀಯ ಕಾಂಗ್ರೆಸ್ ನಾಯಕರು ಮತ್ತು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸಿ ಹಣ ವಸೂಲಿ ಮಾಡಿದ್ದಾನೆ. ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಹೋಗಿ ನೋಡಿದರೆ ಅವನ ವಿರುದ್ಧ ದಾಖಲಾದ ಕೇಸ್ಗಳ ವಿವರ ಸಿಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂದುವರೆದು ತಾನು ರಾಜ್ಯದ ಎಲ್ಲ ನಾಯಕರನ್ನು ಭೇಟಿಯಾದರೂ ಪ್ರಯೋಜನವಾಗಿಲ್ಲ. ಬಿಜೆಪಿ ನಾಯಕರೇ ತನ್ನನ್ನು ಪ್ರಬಲ ಪ್ರತಿಸ್ಪರ್ಧಿ ಎಂದು ಭಾವಿಸಿದ್ದರು ಎಂದು ಹೇಳಿದ್ದಾರೆ.