ಬೆಂಗಳೂರು, ಅ.25(DaijiworldNews/AK): ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆರು ಸಿಬ್ಬಂದಿಗೆ ಜಾರಿ ನಿರ್ದೇ ಶನಾಲಯ (ಇ.ಡಿ) ಶುಕ್ರವಾರ ಸಮನ್ಸ್ ಜಾರಿಮಾಡಿದೆ.
ಅಲ್ಲದೇ ಬೆಂಗಳೂರಿನಲ್ಲಿರುವ ಇ.ಡಿ ಕಚೇ ರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸೂಚಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನಿವೇ ಶನ ಹಂಚಿಕೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯವು (ಇ.ಡಿ), ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿ ಮತ್ತು ಮೈಸೂರು ತಾಲ್ಲೂಕು ಕಚೇರಿಯಲ್ಲಿ ಈಚೆಗೆ ಶೋಧ ಕಾರ್ಯ ನಡೆಸಿತ್ತು.
ಸಿಎಂ ಪತ್ನಿ ಪಾರ್ವತಿ ಅವರ ಸೋದರ ಮಲ್ಲಿಕಾರ್ಜು ನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಕೆಂಗೇರಿ ನಿವಾಸದಲ್ಲೂ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.