ನವದೆಹಲಿ,ಅ.26(DaijiworldNews/TA):ಪಂಜಾಬ್ನ ಮೊಹಾಲಿಯಲ್ಲಿ ವಿದ್ಯಾರ್ಥಿಯೊಬ್ಬರ ಮೇಲೆ ಹಲ್ಲೆ ನಡೆಸಿದ 13 ವರ್ಷಗಳ ಹಿಂದಿನ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಕೇಸ್ ಶುಕ್ರವಾರ ಖುಲಾಸೆಗೊಂಡಿದೆ.
ಫೆಬ್ರವರಿ 5, 2011 ರಂದು ಲಾರೆನ್ಸ್ ಬಿಷ್ಣೋಯ್ ಅವರು ಖಾಲ್ಸಾ ಕಾಲೇಜು ವಿದ್ಯಾರ್ಥಿ ಸತ್ವಿಂದರ್ ಅವರ ನಿವಾಸಕ್ಕೆ ಬಲವಂತವಾಗಿ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿದ ನಂತರ ಪ್ರಕರಣ ದಾಖಲಾಗಿತ್ತು. ಅಲ್ಲದೇ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಏತನ್ಮಧ್ಯೆ, ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಹತ್ಯೆಗೆ ಸಂಬಂಧಿಸಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗಾಗಿ ಕೆಲಸ ಮಾಡುವ ಏಳು 'ಶೂಟರ್ಗಳನ್ನು' ಈ ಹಿಂದೆ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿಯಾದ್ಯಂತ ಬಂಧಿಸಲಾಗಿದೆ.
ಇದೇ ಸಮಯಕ್ಕೆ, ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಮೋಸ್ಟ್ ವಾಂಟೆಡ್ ಪಟ್ಟಿಗೆ ಸೇರಿಸಲಾಗಿದೆ. ಅನ್ಮೋಲ್ ಬಿಷ್ಣೋಯ್ ಬಂಧನಕ್ಕೆ ಭಯೋತ್ಪಾದನಾ ನಿಗ್ರಹ ಸಂಸ್ಥೆ ₹ 10 ಲಕ್ಷ ಬಹುಮಾನವನ್ನೂ ಘೋಷಿಸಿದೆ.