ಬೆಂಗಳೂರು, ಅ.29(DaijiworldNews/AA): ದರ್ಶನ್ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 30 ಕ್ಕೆ ಹೈಕೋರ್ಟ್ ಕಾಯ್ದಿರಿಸಿದೆ.
ಹೈಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ದರ್ಶನ್ಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಇಬ್ಬರ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಆದೇಶವನ್ನು ಅ.30 ಕ್ಕೆ ಕಾಯ್ದಿರಿಸಿ ತೀರ್ಪು ನೀಡಿದ್ದಾರೆ.
ನಿನ್ನೆಯ ವಾದ ಮುಂದುವರೆಸಿದ ದರ್ಶನ್ ವಕೀಲರು, ದರ್ಶನ್ ಬೆನ್ನು ಹುರಿಯ ಸಮಸ್ಯೆ ಯಿಂದ ಬಳಲುತ್ತಿದ್ದಾರೆ. ಅದರಿಂದ ಈಗಾಗಲೇ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೇ ಮುಂದುವರಿದರೆ ಇನ್ನಷ್ಟು ಸಮಸ್ಯೆ ಆಗಬಹುದು. ಡಿಸ್ಕ್ ನಲ್ಲಿನ ಸಮಸ್ಯೆಯಿಂದ ನರದಿಂದ ರಕ್ತಪರಿಚಲನೆ ಆಗುತ್ತಿಲ್ಲ. ಹೀಗಾಗಿ ಶಸ್ತ್ರಚಿಕಿತ್ಸೆ ಅಗತ್ಯವಿದೆ. ಪಾರಂಪರಿಕ ಚಿಕಿತ್ಸೆಯಿಂದ ಇದು ಪರಿಹಾರ ಆಗದು, ಅದಕ್ಕೆ ಶಸ್ತ್ರಚಿಕಿತ್ಸೆಯನ್ನೇ ಮಾಡಿಸಬೇಕು. ಈ ಹಿಂದೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾಗ ಆರೋಗ್ಯ ಸಮಸ್ಯೆ ಉಲ್ಲೇಖಿಸಿರಲಿಲ್ಲ. ಆದರೆ ಈಗ ಸಮಸ್ಯೆ ಉಲ್ಬಣ ಆಗಿರುವ ಕಾರಣ ಕೇಳುತ್ತಿದ್ದೇವೆ. ದರ್ಶನ್ಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ವಾದಿಸಿದರು.