ಬೆಂಗಳೂರು,ಅ.29(DaijiworldNews/AK): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಟೇಶ್ ಅವರನ್ನು ವಶಕ್ಕೆ ಪಡೆದು ಶಾಂತಿನಗರದ ಇ.ಡಿ ಕಚೇರಿಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ಕಚೇರಿಗೆ ಕರೆದೊಯ್ದಿದ್ದಾರೆ. ನಟೇಶ್ರನ್ನು ಬಂಧಿಸುವ ಸಾಧ್ಯತೆ ಇದೆ.
ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳ ಅಕ್ರಮ ಹಂಚಿಕೆಯಾಗಲು ಪ್ರಾಧಿಕಾರದ ಹಿಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಕಾರಣ ಎಂದು ಆರೋಪಿಸಲಾಗಿತ್ತು.ಈ ಹಿನ್ನೆಲೆಯಲ್ಲಿ ನಟೇಶ್ ಮನೆ ಮೇಲೆ ಸೋಮವಾರ ದಾಳಿ ಮಾಡಿ ಇ.ಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ, ತನಿಖೆಗೆ ನಟೇಶ್ ಅವರು ಸಹಕರಿಸಿಲ್ಲ ಎನ್ನಲಾಗಿದೆ.