ಹಾಸನ, ,ಅ.29(DaijiworldNews/AK):ಸ್ವಪಕ್ಷದ ನಾಯಕರಾದ ಬಸನಗೌಡ ಪಾಟೀಲ್, ಪ್ರತಾಪ್ ಸಿಂಹ ಸೇರಿದಂತೆ ಇತರೆ ನಾಯಕರು ಸಹ ಹೊಂದಾಣಿಕೆ ರಾಜಕೀಯ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದೀಗ ಹೊಂದಾಣಿಕೆ ರಾಜಕಾರಣದ ಬಗ್ಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಯಾರಾರರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ ಒಬ್ಬೊಬ್ಬರನ್ನೇ ಪಕ್ಷದಿಂದ ಹೊರ ಹಾಕುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.
ಇಂದು ಹಾಸನಾಂಬೆ ದೇವಿ ದರ್ಶನ ಪಡೆದು ಸುದ್ದಿಗಾರರಿಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ನಮ್ಮ ಪಕ್ಷ ಶುದ್ದೀಕರಣ ಅಗಬೇಕೆಂದು ಅನೇಕ ಹಿರಿಯರ ಆಸೆ ಇತ್ತು. ಅವರ ಆಸೆಗೆ ತಕ್ಕಂತೆ ಶುದ್ದೀಕರಣ ಕೂಡ ಆಗುತ್ತಿದೆ ಎಂದು ಹೇಳಿದ್ದಾರೆ.
ಯಾರಾರರು ಹೊಂದಾಣಿಕೆ ರಾಜಕೀಯ ಮಾಡುತ್ತಾರೆ ಅವರನ್ನ ಹೊರ ಹಾಕುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ ಅವರ ಆಸೆಗೆ ತಕ್ಕಂತೆ ಶುದ್ದೀಕರಣ ಕೂಡ ಆಗುತ್ತಿದೆ. ಬರುವ ದಿನಗಳಲ್ಲಿ ಎಲ್ಲವೂ ಕೂಡ ಸರಿ ಹೋಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೋಳಿ ಅಸಮಾಧಾನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಸಮಾಧಾನ ಹೊರಹಾಕಲು ಬೇರೆ ವ್ಯವಸ್ಥೆ ಮಾಡಿಕೊಡಬೇಕು. ಆ ದಿಕ್ಕಿನಲ್ಲಿ ಯೋಚನೆ ಮಾಡುತ್ತಿದ್ದೇವೆ. ನಾನಂತೂ ಅದರ ಬಗ್ಗೆ ಏನು ತಲೆಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ ಎಂದರು.