ಹಾವೇರಿ, ಅ.29(DaijiworldNews/AK):ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣವನ್ನು ಪರಿಚಯ ಮಾಡಿಕೊಟ್ಟು ಕರಗತ ಮಾಡಿರುವುದೇ ಕಾಂಗ್ರೆಸ್ ಪಕ್ಷ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿಗ್ಗಾಂವಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರು ಉಪಚುನಾವಣೆಯಲ್ಲಿ ಅಕ್ರಮ ತಡೆಯಲು ಬರುತ್ತಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ನವರ ಈ ಹೇಳಿಕೆ ಹಾಸ್ಯಾಸ್ಪದವಾಗಿದೆ. ಚುನಾವಣಾ ಅಕ್ರಮ ತಡೆಯಲು ಎಲೆಕ್ಷನ್ ಕಮಿಷನ್ ಇದೆ. ಅವರು ಅವರ ಕಾರ್ಯವನ್ನು ಮಾಡುತ್ತಿದ್ದಾರೆ. ಆಡಳಿತ ಮಾಡುವ ಸಚಿವರು ಕೆಲಸ ಬಿಟ್ಟು ಅದನ್ನು ಸಚಿವರು ಮಾಡಲು ಬರುತ್ತಿರುವುದು ಹಾಸ್ಯಸ್ಪದ ಎಂದು ಹೇಳಿದರು.
ವಕ್ಫ್ ಆಸ್ತಿ ವಿಚಾರ ವಿರೋಧ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತದೆ. ಸಾಧನೆ ಸರ್ಕಾರದ್ದು ಇರುತ್ತದೆ, ವಿರೋಧ ಪಕ್ಷ ತನ್ನ ಕೆಲಸ ಮಾಡುತ್ತದೆ. ರೈತರಿಗೆ ಯಾರು ನೋಟಿಸ್ ಕೊಟ್ಟರು. 2024ರಲ್ಲಿ ರೈತರ ಪಹಣಿಯಲ್ಲಿ ದಾಖಲೆ ಕೂತಿದೆ. ಅದನ್ನು ಯಾವ ಸರ್ಕಾರ ಮಾಡಿದೆ ಎನ್ನುವುದು ಗೊತ್ತಾಗಿದೆ. ಸರ್ಕಾರ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಹಾಕುವ ಪ್ರವೃತ್ತಿ ಈ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.