ವಿಜಯಪುರ, ನ.01(DaijiworldNews/AA): ಒಂದು ಬಿಯರ್ ಬಾಟಲು 130 ರೂ. ಇದ್ದಿದ್ದು 270 ರೂ. ಆಗಿದೆ. ಗಂಡನಿಗೆ ಹೆಂಡ ಕುಡಿಸಿ, ಹೆಂಡತಿಗೆ ಗ್ಯಾರಂಟಿ ಕೊಡುವುದಾ? ನಿಮಗೆ ಗ್ಯಾರಂಟಿ ಕೇಳಿದ್ದು ಯಾರು? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ವಿಚಾರವಾಗಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣಕ್ಕಾಗಿ 1 ರಿಂದ 10ನೇ ತರಗತಿವರೆಗೆ ಉಚಿತ ಶಿಕ್ಷಣ ಕೊಡಬಹುದಿತ್ತು. ಉಚಿತ ಆರೋಗ್ಯ ತಪಾಸಣೆ ಕೊಡಬಹುದಿತ್ತು. ತೋಚಿದ್ದನ್ನು ಮಾಡಿದ್ದಾರೆ. ಅದು ಜನರಿಗೆ ಬೇಕಾ? ಬೇಡವಾ? ಎಂಬುವುದನ್ನು ಯೋಚಿಸಿಲ್ಲ ಎಂದು ಕಿಡಿಕಾರಿದ್ದಾರೆ.
ನಾನು ರಾತ್ರಿ 11:30ರವರೆಗೂ ಸಿದ್ದರಾಮಯ್ಯನವರಿಗೆ ಕಾದು ಹೇಳಿದ್ದೆ. ಒಂದು ಸಂಸಾರಕ್ಕೆ ಏನು ಸಮಸ್ಯೆ ಇದೆ? ಎನ್ನುವುದನ್ನು ತಿಳಿದು ಮೊದಲು ಅದನ್ನು ಬಗೆಹರಿಸಬೇಕಿದೆ. ದೇವರಾಜ ಅರಸು ಅಕ್ಕಿ ಕೊಡಲಿಲ್ಲ. ಅಕ್ಕಿ ಬೆಳೆಯುವ ಭೂಮಿ ಕೊಟ್ಟಿದ್ದರು. ಸಿದ್ದರಾಮಯ್ಯನವರ ಈ ಗ್ಯಾರಂಟಿ ಯೋಜನೆಯ ನಿರ್ಣಯ ಒಳ್ಳೆಯದಲ್ಲ ಎಂದು ತಿಳಿಸಿದ್ದಾರೆ.