ಪಾಟ್ನಾ, ನ.02(DaijiworldNews/AA): ಒಂದು ರಾಜಕೀಯ ಪಕ್ಷಗಳಿಗೆ ಚುನಾವಣಾ ಕಾರ್ಯತಂತ್ರದ ಸೇವೆಗಳಿಗಾಗಿ 100 ಕೋಟಿಗೂ ಹೆಚ್ಚು ಶುಲ್ಕ ವಿಧಿಸುತ್ತೇನೆ ಎಂದು ಜನ ಸೂರಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ಬಹಿರಂಗಪಡಿಸಿದ್ದಾರೆ.
ಬೆಳಗಂಜ್ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಶಾಂತ್ ಕಿಶೋರ್, ಜನರು ತಮ್ಮ ಅಭಿಯಾನಗಳಿಗೆ ಹಣದ ಮೂಲದ ಬಗ್ಗೆ ಆಗಾಗ್ಗೆ ಪ್ರಶ್ನಿಸುತ್ತಾರೆ. ವಿವಿಧ ರಾಜ್ಯಗಳಲ್ಲಿ ಹತ್ತು ಸರ್ಕಾರಗಳು ನನ್ನ ಕಾರ್ಯತಂತ್ರದ ಮೇಲೆ ನಡೆಯುತ್ತಿವೆ ಎಂದಿದ್ದಾರೆ.
ನನ್ನ ಪ್ರಚಾರಕ್ಕಾಗಿ ಟೆಂಟ್ಗಳು ಸ್ಥಾಪಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ನೀವು ಭಾವಿಸುತ್ತೀರಾ? ನಾನು ಅಷ್ಟು ದುರ್ಬಲ ಎಂದು ನೀವು ಭಾವಿಸಬೇಡಿ. ಬಿಹಾರದಲ್ಲಿ ನನ್ನಷ್ಟು ಶುಲ್ಕವನ್ನು ಯಾರೂ ಕೇಳಿಲ್ಲ. ನಾನು ಕೇವಲ ಒಂದು ಚುನಾವಣೆಯಲ್ಲಿ ಯಾರಿಗಾದರೂ ಸಲಹೆ ನೀಡಿದರೆ ನನ್ನ ಶುಲ್ಕ 100 ಕೋಟಿ ರೂ. ಅಥವಾ ಅದಕ್ಕಿಂತ ಹೆಚ್ಚು ಪಡೆಯುತ್ತೇನೆ. ಮುಂದಿನ ಎರಡು ವರ್ಷಗಳವರೆಗೆ ನಾನು ಅಂತಹ ಒಂದು ಚುನಾವಣಾ ಸಲಹೆಯೊಂದಿಗೆ ನನ್ನ ಪ್ರಚಾರವನ್ನು ನಡೆಸಬಹುದು ಎಂದು ತಿಳಿಸಿದ್ದಾರೆ.