ಶ್ರೀನಗರ, ನ.02(DaijiworldNews/AA): ಜಮ್ಮು ಮತ್ತು ಕಾಶ್ಮೀರದ ಖನ್ಯಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಭಾರತೀಯ ಸೇನೆ ಹಾಗೂ ಭಯೋತ್ಪಾದಕರ ನಡುವೆ ಶನಿವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳ, ಇಂದು ಬೆಳಗ್ಗೆ ಕಾಶ್ಮೀರದ ಖನ್ಯಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ಒಂದು ದಿನದ ಹಿಂದೆಯಷ್ಟೇ ವಲಸೆ ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯ ಬಳಿಕ ಉಗ್ರರು ಖನ್ಯಾರ್ ಪ್ರದೇಶದಲ್ಲಿ ಇರುವುದಾಗಿ ಭದ್ರತಾ ಪಡೆಗಳಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಲು ಪ್ರಾರಂಭಿಸಿತ್ತು. ಈ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಮಗಮ್ ಪ್ರದೇಶದಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೇಲೆ ಉಗ್ರರು ಶುಕ್ರವಾರ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರು ವಲಸೆ ಕಾರ್ಮಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.