ಮುಂಬೈ, ನ.08(DaijiworldNews/AK): ಮೋದಿ ಇದೋವರೆಗೂ ದೇಶದಲ್ಲಿ ಕಾಂಗ್ರೆಸ್ ಯಾವುದೇ ಪಿತೂರಿ ಮಾಡಲು ಸಾಧ್ಯವಿಲ್ಲ. ಅಂಬೇಡ್ಕರ್ ಸಂವಿಧಾನ ಮಾತ್ರ ಈ ದೇಶದಲ್ಲಿ ನಡೆಯುತ್ತದೆ. ಯಾವುದೇ ಶಕ್ತಿಯು 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆ ನಾಸಿಕ್ನಲ್ಲಿ ನಡೆದ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸುವ ರಾಜ್ಯ ಸರ್ಕಾರದ ನಿರ್ಣಯವನ್ನು ತೀವ್ರವಾಗಿ ಖಂಡಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಪಿತೂರಿಗಳ ಬಗ್ಗೆ ಜನರು ಎಚ್ಚರಿಕೆಯಿಂದಿರಬೇಕು. ಇಲ್ಲದಿದ್ದರೆ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.