ಹಾವೇರಿ, ನ.10(DaijiworldNews/TA):ಪ್ರಧಾನಿಮೋದಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾಡಿದ ಆರೋಪಕ್ಕೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ ಆರೋಪ ಸಾಬೀತಾದರೆ ರಾಜಕೀಯಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಕರ್ನಾಟಕದ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಲೂಟಿ ಮಾಡಿದೆ ಎಂಬ ಆರೋಪವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದರು. ಈ ಆರೋಪ ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿಯಾಗುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿಗ್ಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಒಂದು ವೇಳೆ ಆರೋಪ ಸಾಬೀತು ಪಡಿಸಲು ಆಗದಿದ್ದರೆ ನೀವು ರಾಜಕೀಯ ನಿವೃತ್ತಿಯಾಗಬೇಕು ಎಂದು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ನೇರ ಸವಾಲು ಹಾಕಿದ್ದಾರೆ ಎನ್ನಲಾಗಿದೆ.
ದೇಶದ ಪ್ರಧಾನಿ ಇಷ್ಟು ಸುಳ್ಳು ಹೇಳ್ತಾರಲ್ಲ ಎಂದು ಆಶ್ಚರ್ಯವಾಗುತ್ತೆ. ಇಂತಹ ಸುಳ್ಳು ಹೇಳುವಂತಹ ಪ್ರಧಾನಿ ಇತಿಹಾಸದಲ್ಲಿ ಬಂದಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.