ಮೈಸೂರು,ನ.12(DaijiworldNews/AK): ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಜಮೀರ್ ಅಹ್ಮದ್ ಇಂದು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ತನ್ನ ಮಾತು ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದರು. ನಾನು ಮತ್ತು ಕುಮಾರಸ್ವಾಮಿ ಅವರು ಆತ್ಮೀಯರಾಗಿದ್ದವರು. 24 ಗಂಟೆಯಲ್ಲಿ 14 ಗಂಟೆ ಜೊತೆಯಲ್ಲಿ ಇರ್ತಾ ಇದ್ದೊ. ಅವರು ನನ್ನನ್ನು ಕುಳ್ಳ ಅಂತಾ ಕರಿಯುತ್ತಿದ್ದರು, ನಾನು ಕರಿಯಣ್ಣ ಅಂತಿದ್ದೆ. ಈಗ ಚುನಾವಣೆ ಹಿನ್ನೆಲೆ ಅದನ್ನು ದೊಡ್ಡ ವಿಚಾರ ಮಾಡ್ತಾ ಇದ್ದಾರೆ ಎಂದು ಜಮೀರ್ ಹೇಳಿದರು.
ನಾನು ಮೊದಲ ಬಾರಿಗೆ ಕರಿಯಣ್ಣ ಅಂತಿಲ್ಲ. ನಾನು ಅಂತಹದ್ದು ಏನು ಹೇಳಿಲ್ಲ. ನನ್ನ ಮಾತಿನಿಂದ ಯಾರಿಗಾದ್ರು ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. . ನನ್ನ ಹೇಳಿಕೆಯಿಂದ ಉಪಚುನಾವಣೆ ಮೇಲೆ ಯಾವುದೇ ಪರಿಮಾಣ ಬೀರುವುದಿಲ್ಲ ಎಂದು ತಿಳಿಸಿದರು.