ಮೈಸೂರು, ಜೂ 04 (Daijiworld News/SM): ರಾಜ್ಯದಲ್ಲಿ ಇತ್ತೀಚೆಗೆ ಪ್ರಕಟವಾದ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ಬಳಿಕ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಇವಿಎಂ ಯಂತ್ರದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಪ್ರಕಟವಾದ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇವಿಎಂ ಮೇಲಿನ ಅನುಮಾನವನ್ನು ಪುಷ್ಠಿಯಾಗಿದೆ ಎಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಲೀಡ್ ಸಿಕ್ಕಿರುವ ಕಡೆಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅದರ ವಿರುದ್ಧ ಫಲಿತಾಂಶ ಬಂದಿದ್ದು, ಕಾಂಗ್ರೆಸ್ಗೆ ಲೀಡ್ ಬಂದಿದೆ. ಇದರಿಂದ ಬಿಜೆಪಿಯವರು ಇವಿಎಂಗಳನ್ನು ಮ್ಯಾನುಪ್ಲೇಟ್ ಮಾಡುತ್ತಿದ್ದಾರೆ ಎಂಬ ಅನುಮಾನ ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಿದರು.
ಪ್ರತಿ ಬಾರಿ ಚುನಾವಣೆಗಳಲ್ಲಿ ಜನರು ಸ್ಥಳೀಯ ವಿಚಾರಗಳ ಮೇಲೆ ಮತ ಹಾಕುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ದೇಶದ ಬಗ್ಗೆ ಗಮನ ಇಟ್ಟುಕೊಂಡು ಮತ ಹಾಕಿದ್ದರೂ, ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಸ್ಥಳೀಯ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಕೊಟ್ಟಿದ್ದಾರೆ ಎಂದರು.
ಇನ್ನು ಪ್ರತಿ ಚುನಾವಣೆಯ ಫಲಿತಾಂಶ ಹೊರ ಬೀಳುವ ಸಂದರ್ಭದಲ್ಲೂ ಫಲಿತಾಂಶದಲ್ಲಿ ವ್ಯತ್ಯಾಸ ಇರುತ್ತದೆ. ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ವ್ಯತ್ಯಾಸ ಇರುತ್ತದೆ ಎಂದರು.