ಬೆಂಗಳೂರು, ನ.19(DaijiworldNews/AK): ಎಡಬಿಡಂಗಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ದೂರದೃಷ್ಟಿ, ಪೂರ್ವ ಸಿದ್ಧತೆ ಹಾಗೂ ಯೋಜನೆ ಯಾವುದು ಇಲ್ಲ. ಕೇವಲ ಚುನಾವಣೆ ಗೆಲ್ಲಲ್ಲು ಮನಸ್ಸಿಗೆ ಬಂದಹಾಗೆ ಕಾಕಾ ಪಾಟೀಲನಿಗೂ ಉಚಿತ, ಮಹಾದೇವಪ್ಪನಿಗೂ ಉಚಿತ ಎಂದು ಸುಳ್ಳು ಪ್ರಚಾರ ಮಾಡಿ ಅಧಿಕಾರಕ್ಕೆ ಬಂದಿದೆ ಎಂದು ವಿಧಾನಸಭೆ ವಿರೋ ಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಎಕ್ಸ್ನನಲ್ಲಿ ಪೋಸ್ಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆಯ ಹೊರೆಹೊರಲಾಗದೆ ಲಕ್ಷಾಂತರ ಬಿಪಿಎಲ್ ಕಾರ್ಡ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರದ್ದು ಮಾಡುತ್ತಿದೆ. ತೆರಿಗೆದಾರರು, ಸರ್ಕಾರಿ ನೌಕರರಿಗೆ ಉಚಿತ ಅಕ್ಕಿ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಹಾಗಾದರೆ, ಶಕ್ತಿ ಯೋಜನೆ ಅಡಿಯಲ್ಲಿ ತೆರಿಗೆದಾರರು, ಸರ್ಕಾರಿ ನೌಕರರು ಉಚಿತ ಬಸ್ ಸೇವೆ ಬಳಸುತ್ತಿಲ್ಲವೇ? ಗೃಹಜ್ಯೋತಿಯೋಜನೆಯಡಿಯಲ್ಲಿ 200 ಯೂನಿಟ್ವರೆಗೆ ಉಚಿತ ವಿದ್ಯುತ್ ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.ಈಗ ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ನುಂಗಲಾರದ, ಉಗಿಯಲಾರದ ಬಿಸಿ ತುಪ್ಪವಾಗಿದೆ ಎಂದು ಕಿಡಿಕಾರಿದ್ದಾರೆ.