ಕೋಲಾರ, ನ.20(DaijiworldNews/AA): ಅನರ್ಹರಲ್ಲದವರು ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದು, ಇದನ್ನು ಪರಿಶೀಲನೆ ಮಾಡಿ ಎಪಿಎಲ್ಗೆ ವರ್ಗಾಯಿಸಲಾಗುತ್ತಿದೆ ಹೊರತು ರದ್ದುಗೊಳಿಸುತ್ತಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಶೇಕಡ 70 - ೮೦ರಷ್ಟು ಬಿಪಿಎಲ್ ಕಾರ್ಡ್ಗಳು ಇರಲು ಸಾಧ್ಯವಿಲ್ಲ. ಹೀಗಾಗಿ ವೈಜ್ಞಾನಿಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಆರ್ಥಿಕವಾಗಿ ಸುಭದ್ರವಾಗಿದ್ದು ದೇಶದಲ್ಲಿ ತೆರಿಗೆ ಪಾವತಿಯಲ್ಲಿ ಮಹಾರಾಷ್ಟ್ರ ನಂತರ, ಕರ್ನಾಟಕ ಇದೆ. ಇಂತಹದರಲ್ಲಿ ಶೇ.70 ರಿಂದ ೮೦ರಷ್ಟು ಇರಲು ಸಾಧ್ಯನಾ ಎಂದು ಪ್ರಶ್ನಿಸಿದ್ದಾರೆ.
ಕೇರಳ, ಆಂದ್ರ, ತೆಲಂಗಾಣ, ತಮಿಳುನಾಡು ರಾಜ್ಯಗಳಲ್ಲಿ ಶೇ.50ರಷ್ಟು ಮಾತ್ರ ಬಿಪಿಎಲ್ ಕಾರ್ಡ್ ಗಳು ಇವೆ ಎಂದು ಹೇಳಿದ್ದಾರೆ. ಸರ್ಕಾರಿ ಕೆಲಸ, ತೆರಿಗೆ ಪಾವತಿ ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಆದಾಯ ಇರುವರನ್ನು ಪತ್ತೆ ಹಚ್ಚಲಾಗುತ್ತಿದೆ. ಈ ಬಗ್ಗೆ ಅಂಕಿ ಅಂಶ ಸಮೇತ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.