ಬೆಂಗಳೂರು, ನ.20(DaijiworldNews/AK):ನಗರದ ರಾಜ್ಕುಮಾರ್ ರಸ್ತೆಯ ಬಳಿ ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಬೆಂಕಿ ಹೊತ್ತಿಕೊಂಡ ಘಟನೆಗೆ ಸಂಬಂಧಿಸಿದಂತೆ ಶೋರೂಂ ಮಾಲೀಕ ಹಾಗೂ ಮ್ಯಾನೇಜರ್ನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಮಾಲೀಕ ಪುನೀತ್ ಹಾಗೂ ಮ್ಯಾನೇಜರ್ ಯುವರಾಜ್ ಎಂದು ಗುರುತಿಸಲಾಗಿದೆ.ನ.19 ರಂದು ಸಂಜೆ 5:30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಸಂಪೂರ್ಣ ಭಸ್ಮವಾಗಿತ್ತು. ಘಟನೆಯಲ್ಲಿ ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿದ್ದ ಪ್ರಿಯಾ ಎಂಬ ಯುವತಿ ಯುವತಿ ಸಜೀವ ದಹನಗೊಂಡಿದ್ದು, ಮೂವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಗ್ನಿ ಅವಘಡ ಸಂಬಂಧ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿದೆ. ಪೊಲೀಸರು ಮೂವರು ಗಾಯಾಳುಗಳ ಹೇಳಿಕೆ ಪಡೆದುಕೊಂಡಿದ್ದು, ಯುವತಿಯ ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ತನಿಖೆ ನಡೆಸಲಿದ್ದಾರೆ.