ಮುಂಬೈ, ನ.26(DaijiworldNews/TA):ಏಕನಾಥ್ ಶಿಂಧೆ ಅವರು ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ.

ಮಹಾರಾಷ್ಟ್ರ ವಿಧಾನಸಭೆಯ ಅವಧಿ ಇಂದಿಗೆ ಮುಕ್ತಾಯವಾಗುತ್ತಿದ್ದಂತೆ ಶಿಂಧೆ ಅವರು ತಮ್ಮ ಪ್ರತಿನಿಧಿಗಳಾದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದರು. ವಿಚಾರ ಪ್ರಸ್ತಾಪದ ನಂತರ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದರು.ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ. ಆದರೆ ಈಗ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದೇ ಸಸ್ಪೆನ್ಸ್.
ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಒಳಗೊಂಡಿರುವ ಮಹಾಯುತಿ ಒಕ್ಕೂಟವು ಈಗಷ್ಟೇ ಮುಕ್ತಾಯಗೊಂಡ ರಾಜ್ಯ ಚುನಾವಣೆಯಲ್ಲಿ 288 ಅಸೆಂಬ್ಲಿ ಸ್ಥಾನಗಳಲ್ಲಿ 230 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ, ಅಘಾಡಿ ಕೇವಲ 46 ಸ್ಥಾನಗಳೊಂದಿಗೆ ಉಳಿದಿದೆ.
ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತ ಪಡೆದ ನಂತರ ಸಿಎಂ ಸ್ಥಾನಕ್ಕಾಗಿ ಬಿಜೆಪಿ ಮತ್ತು ಶಿವಸೇನೆ ನಡುವೆ ಹಣಾಹಣಿ ನಡೆಯುತ್ತಿದೆ ಎಂದು ಹೇಳಲಾಗಿದೆ.