ನವದೆಹಲಿ, ನ.27(DaijiworldNews/AK): ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕ ಕೋರ್ಟ್ ನಲ್ಲಿ ಗೌತಮ್ ಅದಾನಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕುರಿತು ಚರ್ಚೆಗೆ ಒತ್ತಾಯಿಸಿರುವ ಕಾಂಗ್ರೆಸ್ ಸಂಸದ ಮಾಣಿಕ್ಯಂ ಟಾಗೋರ್ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದಾರೆ.

ಅದಾನಿ ವಿಷಯದಲ್ಲಿ ಮೋದಿ ಸರ್ಕಾರದ ಮೌನವು ಭಾರತದ ಸಮಗ್ರತೆ ಮತ್ತು ಜಾಗತಿಕ ಸ್ಥಾನಮಾನದ ಬಗ್ಗೆ ಕಳವಳವನ್ನು ಉಂಟುಮಾಡುತ್ತದೆ. ಅದಾನಿ ಜೊತೆಗಿನ ಗೆಳೆತನಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಬೇಕು ಎಂದು ಟಾಗೋರ್ ನೋಟಿಸ್ನಲ್ಲಿ ತಿಳಿಸಿದ್ದಾರೆ.
ಅಲ್ಲದೇ ಜಗನ್ ಮೋಹನ್ ರೆಡ್ಡಿ ಸರ್ಕಾರಕ್ಕೆ ಅದಾನಿ 1,750 ಕೋಟಿ ರೂ. ಲಂಚ ನೀಡಿದ್ದಾರೆ ಎಂದು ಆರೋ ಪಿಸಿ ಆಂಧ್ರ ಪ್ರದೇ ಶ ಸರ್ಕಾರವು ಎಸ್ಇಸಿಐ ಜೊತೆಗಿನ ಸೌರ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸಲು ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ಈ ಆರೋಪಗಳ ಬಗ್ಗೆ ತಕ್ಷಣ ಚರ್ಚೆ ನಡೆಸಬೇಕು ಮತ್ತು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.