ಬೆಂಗಳೂರು,, ನ.27(DaijiworldNews/AK): ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಸೋ ಲಿನ ಬೆನ್ನಲ್ಲೇ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಕಾರ್ಯ ಕರ್ತರನ್ನು ಉದ್ದೇಶಿಸಿ ಪತ್ರ ಬರೆದು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.

ನಿಖಿಲ್ ಬರೆದ ಪತ್ರದಲ್ಲಿ ಏನಿದೆ?
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿದ್ದ ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕೆ ಆಯಿತು ಎಂದು ಈಗಾಗಲೇ ಕಾರಣ ಕೊಟ್ಟಿದ್ದೇನೆ. ಹಾಗೆಂದು ಸೋಲಿಗೆ ಹೆದರಿ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ, ನಮ್ಮ ಪಕ್ಷದ್ದೂ ಅಲ್ಲ. ಇಂಥ ಅನೇಕ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ.
ಸತತ ಹೋರಾಟಗಳ ಮೂಲಕ ಪಕ್ಷವು ಫೀನಿಕ್ಸ್ ಎದ್ದು ಬಂದಿದೆ. ಪಕ್ಷದ ಇಂತಹ ಅನೇಕ ಏಳುಬೀ ಳಿನ ದಾರಿಯಲ್ಲಿ ನಾನೊಬ್ಬ ಸಣ್ಣ ಪಯಣಿಗ. ಅಷ್ಟಾಗಿಯೂ ಅನೇಕ ನಾಯಕರನ್ನು ಪಕ್ಷವು ರಾಜ್ಯಕ್ಕೆ ಧಾರೆಯೆರೆದು ಕೊಟ್ಟಿದೆ, ಅದು ಮಣ್ಣಿನಮಗ ಪೂಜ್ಯ ದೇವ ಗೌಡರ ಗರಡಿಯ ಫಲ.
ಈ ಸೋಲು ನನಗೆ ನೋವುಂಟು ಮಾಡಿದೆ, ನಿಜ. ಇಲ್ಲ ಎಂದು ಹೇಳಿ ಆತ್ಮವಂಚನೆ ಮಾಡಿಕೊಳ್ಳುವುದಿಲ್ಲ. ಹಾಗಂತ, ಸೋಲುತ್ತೇನೆ ಎಂದು ನಾನು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಗೆಲ್ಲಲು ಪ್ರಾಮಾಣಿಕವಾಗಿ ಹೋರಾಡಿದ್ದೇವೆ. ಕೆಲ ಅಂಶಗಳಿಂದ ಹಿನ್ನಡೆಯಾಗಿದೆಯಾದರೂ ಮತ್ತೆ ಪುಟಿದೆದ್ದು ಬರುವ ಛಲ ನನಗಿದೆ. ನೋವು ಭರಿಸುವ ಶಕ್ತಿ ಹೇಗೆ ನನ್ನಲ್ಲಿ ತುಂಬಿದೆಯೋ. ಹಾಗೆಯೇ ಛಲದಿಂದ ಎದ್ದು ಬರುವ ಕೆಚ್ಚನ್ನೂ ರಕ್ತಗತವಾಗಿ ರೂಢಿಸಿಕೊಂದಿದ್ದೇನೆ.
'ನಿಖಿಲ್ ಬಚ್ಚಾ.. ಪಾಪ ನಿಖಿಲ್' ಎಂಬ ಅನುಕಂಪಕ್ಕೆ ತುತ್ತಾಗಿ ಕೈ ಚೆಲ್ಲುವ ಬಾಲಬುದ್ಧಿಯ ಮನಸ್ಥಿತಿಯವನಲ್ಲ ನಾನು. ಹಿಂದಿನ ಎರಡು ಸೋಲುಗಳು ನನಗೆ ಅಸಹಾಯಕತೆಯನ್ನು ಮೆಟ್ಟಿನಿಂತು ಅಪಮಾನ ಧಿಕ್ಕರಿಸಿ ಸೆಣಸುವ ಆತ್ಮಬಲ ಕೊಟ್ಟಿವೆ. ಚನ್ನಪಟ್ಟಣದಲ್ಲಿಯೂ ಆದೇ ಛಲ, ಆತ್ಮಬಲದಿಂದ ಜೆಡಿಎಸ್-ಬಿಜೆಪಿ ಕಾರ್ಯಕರ್ತರು, ಮುಖಂಡರ ಜತೆಗೂಡಿ ದಿಟ್ಟ
ಹೋರಾಟ ನಡೆಸಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದರೆ.