ಬಳ್ಳಾರಿ, ನ.28(DaijiworldNews/AK):ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಐವರು ಬಾಣಂತಿಯರು ಸರಣಿ ಸಾವನ್ನಪ್ಪಿದ್ದಾರೆ. ಹೀಗಾಗಿ ಈ ಸಾವುಗಳಿಗೆ ಏನು ಕಾರಣ ಎಂದು ತನಿಖೆ ನಡೆಸಲು ಸರ್ಕಾರ ತಜ್ಞರ ಸಮಿತಿಯನ್ನು ರಚನೆ ಮಾಡಿದೆ.

ಡಾ. ಸವಿತಾ, ಡಾ. ಭಾಸ್ಕರ್ ಮತ್ತು ಡಾ. ಹರ್ಷ ಅವರನ್ನು ಒಳಗೊಂಡ ತಜ್ಞರ ಸಮಿತಿಯನ್ನು ಸರ್ಕಾರ ರಚನೆ ಮಾಡಿದ್ದು, ಈ ಕೂಡಲೇ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಾವಿಗೆ ಏನು ಕಾರಣ ಎಂದು ತನಿಖೆ ನಡೆಸಬೇಕು. ತನಿಖೆ ಬಳಿಕ ಸರ್ಕಾರಕ್ಕೆ ತುರ್ತು ವರದಿಯನ್ನ ಸಲ್ಲಿಕೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.
ಒಂದು ವಾರದ ಅಂತರದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ನಿನ್ನೆ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೆ ಓರ್ವ ಬಾಣಂತಿ ಸಾವನ್ನಪ್ಪಿದ್ದರು.